ಬೆಂಗಳೂರು: ಮುಡಾ ತೂಗುಗತ್ತಿಯಿಂದ ಸಿಎಂ ರಿಲೀಫ್ ಪಡೆದಿದ್ದಾರೆ. ಹೌದು ಮುಡಾ ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್ಚಿಟ್ ನೀಡಲಾಗಿದೆ.
ಕಂಕುಳಿನ ಬೆವರಿನಿಂದ ಕೆಟ್ಟ ವಾಸನೆ ಬರ್ತಿದ್ಯಾ..? ಹಾಗಿದ್ರೆ ಈ ಸಮಸ್ಯೆಗೆ ಇಲ್ಲಿದೆ ಪರಿಹಾರ!
ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.
ನಾಳೆ ಕೇವಲ 4 ಜನರ ವಿರುದ್ಧ ಅಂತಿಮ ವರದಿ ಸಲ್ಲಿಕೆ
A1 ಸಿದ್ದರಾಮಯ್ಯ
A2 ಪಾರ್ವತಿ
A3 ಮಲ್ಲಿಕಾರ್ಜುನ ಸ್ವಾಮಿ
A4 ದೇವರಾಜು
ಇನ್ನು ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ. ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು ತನಿಖೆ ನಡೆಸಲು ತಕ್ಕುದಲ್ಲವೆಂದು ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು ಕ್ರಮ ಜರುಗಿಸತಕ್ಕುದಲ್ಲವೆಂದು ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ.
ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದೆ. ಹೀಗಾಗಿ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದಿದೆ. ಇನ್ನು ಈ ವರದಿಯನ್ನು ವಿರೋಧಿಸುವುದಿದ್ದರೆ ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ್ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ತಿಳಿಸಿದೆ.