ಹುಬ್ಬಳ್ಳಿ : ಬಡ ಮಕ್ಕಳಿಗೆ ವಿತರಣೆ ಮಾಡಬೇಕಿದ್ದ ಅಂಗನವಾಡಿ ಆಹಾರ ಪದಾರ್ಥಗಳನ್ನು, ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋಡನ್ ನಲ್ಲಿ ಸಂಗ್ರಹಿಸಿಟ್ಟು, ಪ್ರಕರಣ ಬೆಳಕಿಗೆ ಬರುತ್ತಲೇ ತಲೆ ಮರೆಸಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಕಾಂಗ್ರೆಸ್ ಮುಖಂಡೆ ಬತುಲ್ಲಾ ಕಿಲ್ಲೆದಾರ ಶ್ರೀಘ್ರ ಬಂಧನಕ್ಕೆ ಆಗ್ರಹಿಸಿ ಮತ್ತು ಅವರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಕೈವಾಡಯಿದೆ ಅಂತ ಆರೋಪಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಟ್ಟಡ ಕಾರ್ಮಿಕರಿಗೆ ಉಚಿತ ನಿವೇಶನ ನೀಡಿ : ಸಿಐಟಿಯು ತಾಲೂಕು ಅಧ್ಯಕ್ಷ ಹೊನ್ನೂರ್ ಸಾಹೇಬ್
ಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರ ಆಕ್ರೋಶ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಿಎಂ ಸಿದ್ದರಾಮಯ್ಯ, ಶಾಸಕ ಪ್ರಸಾದ ಅಬ್ಬಯ್ಯಯೊಂದಿಗೆ ಇರುವ ಆರೋಪಿ ಫೋಟೋ ಹಿಡಿದು ಘೋಷಣೆ ಕೂಗಿ, ಪ್ರಸಾದ ಅಬ್ಬಯ್ಯ ಅವರ ಪೋಷಿತ ಕಳ್ಳಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದಲೇ ಈ ಕಳ್ಳತನ ನಡೆದಿದೆ ಎಂದು ಆರೋಪಿಸಿದ್ದಾರೆ.