ದೆಹಲಿಯ ಸಿಂಹಾಸನದ ಮೇಲೆ ಔರ್ ಏಕ್ ರಾಣಿ. ಮೊದಲ ಬಾರಿಗೆ ಶಾಸಕಿಯಾಗಿ ಗೆದ್ದಿರುವ ರೇಖಾ ಗುಪ್ತಾ, ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರೇಖಾ ಗುಪ್ತಾ ಸಿಎಂ ಸೇರಿದಂತೆ ಆರು ಸಚಿವರೊಂದಿಗೆ ದೆಹಲಿಯಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ.
ಪ್ರಮಾಣವಚನ ಸಮಾರಂಭಕ್ಕಾಗಿ ರಾಮಲೀಲಾ ಮೈದಾನದಲ್ಲಿ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿಯ ಉನ್ನತ ನಾಯಕರು, ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರಮುಖ ಎನ್ಡಿಎ ನಾಯಕರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
ರೇಖಾ ಗುಪ್ತಾ ಯಾರು?:
ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಗುಪ್ತಾ ಅವರ ಹೆಸರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ರೇಖಾ ಗುಪ್ತಾ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಂದನಾ ಕುಮಾರಿ ಅವರನ್ನು 29,595 ಮತಗಳ ಭಾರೀ ಅಂತರದಿಂದ ಸೋಲಿಸಿದ್ದಾರೆ.
Turmeric Milk: ಈ ಸಮಸ್ಯೆಗಳಿದ್ದರೆ ತಪ್ಪಿಯೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯಬೇಡಿ!
ರೇಖಾ ಗುಪ್ತಾ ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸಕ್ರಿಯ ಸದಸ್ಯೆ. ಆರ್ಎಸ್ಎಸ್ನ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮೂಲಕ ವಿದ್ಯಾರ್ಥಿ ರಾಜಕೀಯವನ್ನು ಪ್ರವೇಶ ಮಾಡಿದ ರೇಖಾ ಗುಪ್ತಾ 2003-2004ರವರೆಗೆ ಬಿಜೆಪಿ ಯುವ ಮೋರ್ಚಾ ದೆಹಲಿಯಲ್ಲಿ ಕಾರ್ಯದರ್ಶಿಯಾಗಿದ್ದರು. 2004-2006ರಲ್ಲಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಅವರು 2007ರ ಏಪ್ರಿಲ್ ತಿಂಗಳಲ್ಲಿ ಬಿಜೆಪಿ ಟಿಕೆಟ್ ಪಡೆದು ಉತ್ತರ ಪಿತಂಪುರಾ ವಾರ್ಡ್ನಿಂದ ಕೌನ್ಸಿಲರ್ ಆಗಿದ್ದರು. 2010ರಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರನ್ನಾಗಿದ್ದರು.
ಬಿಜೆಪಿಯ 2ನೇ ಮಹಿಳಾ ಸಿಎಂ:
ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಲಿರುವ ರೇಖಾ ಗುಪ್ತಾ ಬಿಜೆಪಿಯಿಂದ ಎರಡನೇ ಮಹಿಳಾ ಸಿಎಂ ಆಗಿದ್ದಾರೆ. ಸುಷ್ಮಾ ಸ್ವರಾಜ್ ಬಳಿಕ ಸಿಎಂ ಸ್ಥಾನಕ್ಕೆ ಏರುತ್ತಿರುವ ರೇಖಾ ಗುಪ್ತಾ ವಿದ್ಯಾರ್ಥಿ ನಾಯಕತ್ವದಲ್ಲಿ ಬೇರೂರಿರುವ ದೀರ್ಘ ರಾಜಕೀಯ ಜೀವನವನ್ನು ಹೊಂದಿರುವ ಅನುಭವಿ ಬಿಜೆಪಿ ನಾಯಕಿ. ಪ್ರಸ್ತುತ ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 50 ವರ್ಷ ವಯಸ್ಸಿನ ರೇಖಾ ಶರ್ಮ ಈ ಹಿಂದೆ ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅವರು ಶಾಲಿಮಾರ್ ಬಾಗ್ (ವಾಯುವ್ಯ) ಸ್ಥಾನವನ್ನು 68,200 ಮತಗಳಿಂದ ಗೆದ್ದರು.
ವೃತ್ತಿಯಲ್ಲಿ ವಕೀಲರಾಗಿರುವ ರೇಖಾ ಗುಪ್ತಾ, 1996ರಿಂದ 1997ರವರೆಗೆ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (DUSU) ಅಧ್ಯಕ್ಷರಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ನಂತರ ಅವರು ಪುರಸಭೆಯ ರಾಜಕೀಯಕ್ಕೆ ಪ್ರವೇಶಿಸಿದರು. 2007ರಲ್ಲಿ ಉತ್ತರಿ ಪಿತಂಪುರ (ವಾರ್ಡ್ 54) ನಿಂದ ದೆಹಲಿ ಕೌನ್ಸಿಲರ್ ಚುನಾವಣೆಯಲ್ಲಿ ಗೆದ್ದರು. ರೇಖಾ ಗುಪ್ತಾ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ನ ಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.