ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಬಳಿಕ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾವರ್ತಿ, ಬಾಮೈದ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜುಗೆ ಕ್ಲೀನ್ಚಿಟ್ ನೀಡಲಾಗಿದೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ತನಿಖಾಧಿಕಾರಿ ಎಸ್ಪಿ ಉದೇಶ್ ಇಂದು ಬೆಳಗ್ಗೆ ಅಂತಿಮ ವರದಿಯ ಜೊತೆ ನ್ಯಾಯಾಲಯಕ್ಕೆ ಆಗಮಿಸಿ ಸಲ್ಲಿಕೆ ಮಾಡಿದರು.
Turmeric Milk: ಈ ಸಮಸ್ಯೆಗಳಿದ್ದರೆ ತಪ್ಪಿಯೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯಬೇಡಿ!
50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ. ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ.