ಮೈಸೂರು : ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಭಾರೀ ಚರ್ಚೆ ಗ್ರಾಸವಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿಯನ್ನು ಬಂಧಿಸಲಾಗಿದೆ. ಗಲಾಟೆ ನಡೆದ 11 ದಿನಗಳ ಬಳಿಕ ಗಲಭೆಗೆ ಪ್ರಚೋದಿಸಿದ್ದ ಆರೋಪದಡಿ ಮೌಲ್ವಿ ಮುಫ್ತಿ ಮುಸ್ತಾಕ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್: ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಗೆ ಸಿಕ್ತು ಜಾಮೀನು!
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಂತರ ಯುವಕನೋರ್ವ ಸೋಷಿಯಲ್ಲಿ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಒಂದು ಫೋಸ್ಟ್ ಗಲಭೆಗೆ ಕಾರಣವಾಗಿತ್ತು. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಆ ವೇಳೆ ಠಾಣೆ ಮುಂದೆ ಜಮಾಯಿಸಿದ್ದ ಗುಂಪೊಂದು ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸ್ ಠಾಣೆ ವಾಹನಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತ್ತು. ಈ ಘಟನೆಯ ಭಯಾನಕ ಸಿಸಿಟಿವಿ ದೃಶ್ಯಗಳು ನಂತರ ವೈರಲ್ ಆಗಿದ್ದವು. ಇದೇ ಪ್ರಕರಣ ವಿರೋಧಿಸಿ ಬಿಜೆಪಿ ಸಹ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿತ್ತು. ಇದೀಗ ಕಲ್ಲು ತೂರಾಟಕ್ಕೆ ಪ್ರಚೋದನೆ ನೀಡಿದ ಆರೋಪ ಮೌಲ್ವಿ ಮುಫ್ತಿ ಮುಸ್ತಾಕ್ ಮೇಲಿದೆ.