ಬೆಂಗಳೂರು:-ಇಂದಿನಿಂದ ಬೆಂಗಳೂರಿನಲ್ಲಿ WPL ಮ್ಯಾಚ್ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಮೆಟ್ರೋ ಶುಭ ಸುದ್ದಿ ಕೊಟ್ಟಿದೆ. ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದಿನಿಂದ WPL ಮ್ಯಾಚ್ ನಡೆಯಲಿದ್ದು, ಪಂದ್ಯ ನೋಡಲು ಹೋಗುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಸ್ನಾನ ಮಾಡುವಾಗ ಮೂತ್ರ ವಿಸರ್ಜನೆ ಮಾಡ್ತೀರಾ!? ಹಾಗಿದ್ರೆ ಸಂಶೋಧನೆ ಹೇಳುವುದೇನು?
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 01 ರಂದು ಪಂದ್ಯಗಳು ನಡೆಯಲಿದ್ದು, ಹಾಗಾಗಿ ನಮ್ಮ ಮೆಟ್ರೋ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯಲಿರುವ ಹಿನ್ನೆಲೆ ನಮ್ಮ ಮೆಟ್ರೋ ರೈಲು ಸೇವೆಯನ್ನುr ವಿಸ್ತರಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕ್ರಿಕೆಟ್ ಪಂದ್ಯಗಳನ್ನು ಅಭಿಮಾನಿಗಳು ನೋಡಲು ಬರುತ್ತಾರೆ. ಆ ದೃಷ್ಟಿಯಿಂದ ಅವರ ಅನುಕೂಲಕ್ಕಾಗಿ ಮೆಟ್ರೋ ವ್ಯವಸ್ಥೆ ಕಲ್ಪಿಸಿದೆ.
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಿದ್ದು, ಚಲ್ಲಘಟ್ಟ,e ವೈಟ್ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ರಾತ್ರಿ 11.20ಕ್ಕೆ ಕೊನೆಯ ರೈಲು ಸೇವೆ ಇರಲಿದೆ. ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡಲಿದೆ.