ಕೋಲ್ಕತ್ತಾ:- ಕಾರು ಅಪಘಾತದಲ್ಲಿ ಪ್ರಾಣಾಪಾಯದಿಂದ ಸೌರವ್ ಗಂಗೂಲಿ ಪಾರಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ ಎಕ್ಸ್ಪ್ರೆಸ್ವೇಯಲ್ಲಿ ಜರುಗಿದೆ.
ಕುಡಿತದ ಚಟಕ್ಕೆ ದಾಸನಾದ ಮಗ: ಹಣಕ್ಕಾಗಿ ತಾಯಿಗೆ ಚಾಕು ಇರಿದು ತಾಳಿ ಕದ್ದೊಯ್ದ!
ಬರ್ಧಮಾನ್ಗೆ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ ರೇಂಜ್ ರೋವರ್ ಕಾರು ಸಾಮಾನ್ಯ ವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ಲಾರಿಯೊಂದು ಇದ್ದಕ್ಕಿದ್ದಂತೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಈ ಸಂದರ್ಭದಲ್ಲಿ ಗಂಗೂಲಿ ಅವರ ಕಾರು ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ಗಂಗೂಲಿ ಅವರ ಕಾರಿನ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಒಂದು ಬೆಂಗಾವಲು ವಾಹನ ಗಂಗೂಲಿ ಅವರ ಕಾರಿಗೆ ಡಿಕ್ಕಿಯಾಗಿದೆ.
ಅದೃಷ್ಟವಶಾತ್ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸದ ಕಾರಣ ಗಂಗೂಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.