ಬೆಂಗಳೂರು: ಮಹಿಳೆಯರಿಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನಗಳಿದ್ದರೂ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಏರುತ್ತಲೇ ಇವೆ. ಇದೀಗ ಸಿಲಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಧ್ಯರಾತ್ರಿ ವೇಳೆ ಕಾಮುಕರು ಮಹಿಳೆಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅಜಿತ್ , ವಿಶ್ವಾಸ್, ಶಿವು ಪೊಲೀಸರ ವಶಕ್ಕೆ ಪಡೆದಿದ್ದು,
ಬೆಂಗಳೂರಿನ ಕೋರಮಂಗಲ ಸಮೀಪ ಇರುವ ಖಾಸಗಿ ಕಾಲೇಜು ಬಳಿ ಮಹಿಳೆಯೋರ್ವಳು ಬರುತ್ತಿದ್ದಾಗ, ಅಲ್ಲೇ ಹೋಟೆಲ್ ನಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗಳು ಮಹಿಳೆಯನ್ನು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಸುಮಾರು ಮಧ್ಯರಾತ್ರಿ 12:30 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ಮದ್ಯಪಾನ ಮಾಡಿ ಖಾಸಗಿ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಮಹಿಳೆಯನ್ನ ಅತ್ಯಾಚಾರ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ತಕ್ಷಣ 112 ಕರೆ ಮಾಡಿ ದೂರು ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಮಹಿಳೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಕೂಡಾ ತನಿಖೆ ಆರಂಭಿಸಿದ್ದರಿ. ಅದರಂತೆ ಇದೀಗ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಶುರು ಮಾಡಿದ್ದಾರೆ.