ಚಿತ್ರದುರ್ಗ: ಮಹಿಳೆಯೊಬ್ಬರು ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ. ಕಿವಿಯೋಲೆಯನ್ನು ಕಿತ್ತುಕೊಂಡೊಂಡು ಪರಾರಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆಗ್ಗೆರೆ ಗ್ರಾಮದ ಮಹಿಳೆ ಅಂಬಿಕಾ ತಮ್ಮ ತೋಟದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಮಹಿಳೆಯ ತಲೆ ಹಿಂಬದಿಗೆ ಹೊಡೆದು ಮಹಿಳೆಯ ಕಿವಿಯಲ್ಲಿದ್ದ ಓಲೆಗಳನ್ನು ದೋಚಿ ಪರಾರಿಯಾಗಿದ್ದಾನೆ.
ಗಾಯಗೊಂಡ ಮಹಿಳೆಗೆ ತುಮಕೂರು ಜಿಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯೂರು ಡಿವೈಎಸ್ಪಿ ಟಿಬಿ ರಾಜಣ್ಣ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.