ಬೆಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಿಎಸ್ಸಿ ವಿದ್ಯಾರ್ಥಿಯನ್ನು ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವಿಷ್ಣುದಾಸ್ ಬಂಧಿತ ಆರೋಪಿಯಾಗಿದ್ದು, ಕೇರಳದ ಪರಿಚಯಸ್ಥರಿಂದ ವಿಷ್ಣುದಾಸ್ ಎಂಡಿಎಂಎ ಖರೀದಿಸುತ್ತಿದ್ದನು. ನಂತರ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದುಕೊಂಡು ಪರಿಚಯಸ್ಥರಿಗೆ ಹೆಚ್ಚಿನ ಬೆಲೆಗೆ ಡ್ರಗ್ ಮಾರಾಟ ಮಾಡುತ್ತಿದ್ದನು.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 55 ಲಕ್ಷ ಮೌಲ್ಯದ 522 ಗ್ರಾಂ ಎಂಡಿಎಂಎ ಕ್ರಿಸ್ಟೆಲ್ ವಶಕ್ಕೆ ಪಡೆದಿದ್ದು, ಘಟನೆ ಸಂಬಂಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.