ಮಂಡ್ಯ : ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವನ್ನಪ್ಪಿದ ಘಟನೆ ಮಂಡ್ಯದ ರೈಲು ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಜರುಗಿದೆ.
ನಿಮ್ಮ ಮನೆಗೆ ಈ ರೀತಿ ಲಕ್ಷ್ಮಿ ಚೇಳು ಬಂದ್ರೆ ಅದು ಇವುಗಳನ್ನು ಸೂಚಿಸತ್ತೆ!
ಮಾಲ್ಗುಡಿ ಎಕ್ಸ್ಪ್ರೆಸ್ ರೈಲಿಗೆ ಯುವತಿ ಸಿಲುಕಿದ್ದರು. ಮಂಡ್ಯದ ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮಿ ರೈಲಿಗೆ ಸಿಲುಕಿದ ಯುವತಿ ಎನ್ನಲಾಗಿದೆ. ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಗೆ ಮಿಮ್ಸ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ.