ಮಂಡ್ಯ:- ಮಂಡ್ಯ ಪೂರ್ವ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ATMಗಳಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ ವಂಚನೆ: UP ಮೂಲದ ಮೂವರು ಅರೆಸ್ಟ್!
ಹೆಚ್.ಸಿ.ವೆಂಕಟೇಶ್ ಬಂಧಿತ ಆರೋಪಿ. ಆರೋಪಿ ಹೆಚ್.ಸಿ.ವೆಂಕಟೇಶ್ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ ಎರಡು ಕೋಟಿ ರೂಪಾಯಿಗೂ ಅಧಿಕ ಹಣ ಸುಲಿಗೆ ಮಾಡಿದ್ದನು. ಹಣ ನೀಡಿದ ಬಳಿಕ, ನಕಲಿ ನೇಮಕಾತಿ ಪತ್ರವನ್ನು ಸಂತ್ರಸ್ತರಿಗೆ ನೀಡುತ್ತಿದ್ದನು. ಅಬಕಾರಿ ಇಲಾಖೆಯಲ್ಲಿ ಚಾಲಕ ಹುದ್ದೆ ಕೊಡಿಸುತ್ತೇನೆಂದು ಓರ್ವರಿಂದ ನಕಲಿ ದಾಖಲೆ ಸೃಷ್ಟಿಸಿ ಮೂವರಿಂದ 45 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಆರೋಪಿ ವೆಂಕಟೇಶ್ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರತ್ಯೇಕ 3 ಪ್ರಕರಣ ದಾಖಲಾಗಿವೆ