ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಹಬ್ಬದ ಹೋಳಿ ಹಬ್ಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್ ಚಲನಚಿತ್ರ ನಿರ್ಮಾಪಕಿ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ.
ಫರಾ ಖಾನ್ ವಿರುದ್ಧ ಮಾಜಿ ಬಿಗ್ ಬಾಸ್ ಸ್ಪರ್ಧಿ, ಹಿಂದೂಸ್ತಾನಿ ಭಾವೂ ಎಂದೇ ಜನಪ್ರಿಯರಾಗಿರುವ ವಿಕಾಶ್ ಪಾಠಕ್ ಅವರು ತಮ್ಮ ವಕೀಲ ಅಲಿ ಕಾಶಿಫ್ ಖಾನ್ ದೇಶಮುಖ್ ಮೂಲಕ ಫರಾ ಖಾನ್ ವಿರುದ್ಧ ದೂರು ದಾಖಲಿಸಿದ್ದಾರೆ. ಖಾರ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಿಸಲಾಗಿದೆ.
ಟೆಲಿವಿಷನ್ ಅಡುಗೆ ರಿಯಾಲಿಟಿ ಶೋ ಸೆಲೆಬ್ರಿಟಿ ಮಾಸ್ಟರ್ಶೆಫ್ನ ಸಂಚಿಕೆಯಲ್ಲಿ ಫರಾ ನೀಡಿದ ವಿವಾದಾತ್ಮಕ ಹೇಳಿಕೆಗಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ದೂರಿನಲ್ಲಿ, ಹೋಳಿ ಹಬ್ಬವನ್ನು ಫರಾ, ಛಪ್ರಿಗಳ ಹಬ್ಬ ಎಂದು ಕರೆದಿರುವುದು ವಿವಾದಕ್ಕೆ ಕಾರಣವಾಗಿದೆ.
ಇದು ಆಕ್ಷೇಪಾರ್ಹ ಪದವಾಗಿದೆ. ಈ ಹೇಳಿಕೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಈ ರೀತಿ ಉಲ್ಲೇಖಿಸುವುದು ಅನುಚಿತ ಮತ್ತು ಕೋಮು ಸೌಹಾರ್ದತೆಗೆ ಕಾರಣವಾಗಬಹುದು ಎಂದು ಭಾವ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 196, 299, 302 ಮತ್ತು 353 ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಫರಾ ಖಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.