ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಭಾರತ ಮತ್ತು ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ.
ಓಂ ಸಿನಿಮಾ ಸ್ಟೈಲ್ನಲ್ಲಿ ಲವರ್ ಕಾರಿಗೆ ಬೆಂಕಿ ಹಚ್ಚಿದ ಕೇಸ್: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!
ಪಂದ್ಯದಲ್ಲಿ ಟೀಂ ಇಂಡಿಯಾಗೆ ಮೊದಲ ಯಶಸ್ಸನ್ನು ತಂದುಕೊಟ್ಟ ಹಾರ್ದಿಕ್ ಪಾಂಡ್ಯ, ಬಾಬರ್ ವಿಕೆಟ್ ಉರುಳಿಸಿ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದರು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ತಂಡಕ್ಕೆ ಮೊದಲ ವಿಕೆಟ್ಗೆ 41 ರನ್ಗಳ ಜೊತೆಯಾಟ ಸಿಕ್ಕಿತು. ಮಾಜಿ ನಾಯಕ ಬಾಬರ್ ಆಝಂ ಬೌಂಡರಿಗಳನ್ನು ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು. ಆದರೆ ಇನ್ನಿಂಗ್ಸ್ನ 9 ನೇ ಓವರ್ನಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಬಾಬರ್ ಆಝಂ ಅವರನ್ನು ಬಲಿಪಶುವನ್ನಾಗಿ ಮಾಡಿದರು.
ಈ ಓವರ್ನ ಎರಡನೇ ಎಸೆತವನ್ನು ಡ್ರೈವ್ ಮಾಡಲು ಯತ್ನಿಸಿದ ಬಾಬರ್, ವಿಕೆಟ್ ಕೀಪರ್ ಕೆಎಲ್ ರಾಹುಲ್ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಇದಾದ ನಂತರ ಹಾರ್ದಿಕ್ ಪಾಂಡ್ಯ ತಮ್ಮದೇ ಆದ ಶೈಲಿಯಲ್ಲಿ ವಿಕೆಟ್ ಪಡೆದ ಸಂಭ್ರಮಾಚರಣೆ ಮಾಡಿದರು. ಮೊದಲು ಬಾಬರ್ಗೆ ವಿದಾಯ ಹೇಳಿದ ಹಾರ್ದಿಕ್ ಆನಂತರ ಮೈದಾನದಿಂದ ಹೊರಗೆ ಹೋಗಲು ಹೇಳಿದರು. ಪಾಂಡ್ಯ ಅವರ ಈ ಸಂಭ್ರಮಾಚರಣೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಬಾಬರ್ ಆಝಂ 26 ಎಸೆತಗಳಲ್ಲಿ 88.46 ಸ್ಟ್ರೈಕ್ ರೇಟ್ನಲ್ಲಿ 5 ಬೌಂಡರಿಗಳನ್ನು ಒಳಗೊಂಡಂತೆ 23 ರನ್ ಗಳಿಸಿದರು. ಆದರೆ ಈ ಉತ್ತಮ ಆರಂಭದ ಲಾಭವನ್ನು ಪಡೆಯಲು ಬಾಬರ್ಗೆ ಸಾಧ್ಯವಾಗಲಿಲ್ಲ. ಹಾರ್ದಿಕ್ ಎಸೆದ 9ನೇ ಓವರ್ನ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದರು. ಆದರೆ ಪಾಂಡ್ಯ ಮುಂದಿನ ಎಸೆತದಲ್ಲೇ ಬಾಬರ್ ವಿಕೆಟ್ ಪಡೆದು ಸೇಡು ತೀರಿಸಿಕೊಂಡರು.