ಹಾವೇರಿ:- ಜಾತ್ರೆಗೆ ಹೋಗೋದಾಗಿ ಹೇಳಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಜರುಗಿದೆ.
ಮಲಗಿದ್ದಾಗ ಬಾಯಲ್ಲಿ ಜೊಲ್ಲು ಬರ್ತಿದ್ರೆ ನಿರ್ಲಕ್ಷ್ಯ ಬೇಡ: ಇದು ಈ ಕಾಯಿಲೆ ಸಂಕೇತ!
ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಮಹಿಳೆಯ ಸಾವಿನ ಹಿಂದೆ ಅನುಮಾನದ ಹುತ್ತ ಬೆಳೆದಿದೆ. ಇದು ಸಹಜ ಸಾವಾ ಅಥವಾ ರೇಪ್ ಆ್ಯಂಡ್ ಮರ್ಡರ್ ಮಾಡಿದ್ದಾರಾ ಎಂಬ ಪ್ರಶ್ನೆ ಕಾಡುತ್ತಿದೆ. ಮೃತ ಮಹಿಳೆ ಹೆಸರು ಪಕ್ಕಿರವ್ವ ನಿಂಗಪ್ಪ ಸಣ್ಣತಮ್ಮಣ್ಣನವರ. ಕೋಡ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಮಕ್ಕಳು ಮರಿ ಯಾರು ಇಲ್ಲಾ, ಗಂಡ ಸಾವನ್ನಪ್ಪಿದ ನಂತರ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದರು.
ಫೆಬ್ರುವರಿ 15 ರಂದು ಕೋಡ್ ಗ್ರಾಮದಿಂದ ಜಾತ್ರೆಗೆ ಹೋಗುತ್ತೇನೆಂದು ಹೋಗಿದ್ದ ಮಹಿಳೆ, ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಿಲ್ಲೆಯ ಹಿರೇಕೆರೂರು ಪಟ್ಟಣದ ಹೊರವಲಯದಲ್ಲಿರೋ ದುರ್ಗಾದೇವಿ ದೇವಾಲಯದ ಬಳಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.
ಒಟ್ಟಾರೆ ಸಾವಿನ ಸುತ್ತ ಸಾಕಷ್ಟು ಅನುಮಾನಗಳ ಹುತ್ತ ಮೂಡಿದೆ.