ಹುಬ್ಬಳ್ಳಿ : ಧಾರವಾಡ ಜಿಲ್ಲಾ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆ ಸಮಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬ್ಲಾಕ್ ಅಧ್ಯಕ್ಷರ ಸಭೆ ನಡೆಸಲಾಯಿತು. ಹುಬ್ಬಳ್ಳಿ ನಗರದ ಸರ್ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪಕ್ಷದ ಹಳೆ ಕಟ್ಟಡದಲ್ಲಿ ಸಭೆಯಲ್ಲಿ ಕಿತ್ತೂರು ಕರ್ನಾಟಕ ವಿಭಾಗದ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಮಾತನಾಡಿದ ಸದಸ್ಯರು ಕೆಪಿಸಿಸಿ ನಿರ್ದೇಶನದಂತೆ ಮಹಾನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬ್ಲಾಕ್ನಲ್ಲಿ ಕಡ್ಡಾಯವಾಗಿ ಪಕ್ಷದ ಕಚೇರಿಗಳನ್ನು ನಿರ್ಮಿಸಲು ಕಾರ್ಯಪ್ರವತ್ತರಾಗಬೇಕೆಂದು ಹೇಳಿದರು. ಸದ್ಯ ಆಯಾ ಬ್ಲಾಕ್ಗಳಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.
ಅನ್ನಪೂರ್ಣ ಭೋಜನಶಾಲೆ ಉದ್ಘಾಟಿಸಿದ ಡಾ. ವೀರೇಂದ್ರ ಹೆಗ್ಗಡೆ: ಕಾರ್ಯಕ್ರಮದಲ್ಲಿ ಪ್ರಜಾಟಿವಿ ಮುಖ್ಯಸ್ಥ ಪುಟ್ಟರಾಜ್ ಭಾಗಿ
ಇದೇ ಸಂದರ್ಭದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿಯ ಸುಮಾರು 29.88,29 ಚ ಮಿ ಜಮೀನನ್ನು ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ರವರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರಸ, ಮಿತಿಯ ಸದಸ್ಯರಾದ ಮಾಜಿ ಸಚಿವ ವೀರಕುಮಾರ್ ಪಾಟೀಲ, ಮಾಜಿ ಶಾಸಕ ಮೋಹನ್ ಲಿಂಬಿಕಾಯಿ, ಎಫ್ ಹೆಚ್ ಜಕ್ಕಪ್ಪನವರ ವಸಂತ ಲದ್ವ ರಾಜಶೇಖರ ಮೆಣಸಿನಕಾಯಿ ಹಾಗೂ ಶ್ರೀಮತಿ ಗೀತಾ ಥವಂಶಿ ಸೇರಿದಂತೆ ಹಲವಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.