ಬೆಂಗಳೂರು: ಅಕ್ರಮವಾಗಿ ಸರ್ಕಾರಿ ಜಮೀನನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ ವಿರುದ್ಧ ಸಾಮಾಜಿಕ ಹೋರಾಟಗಾರ ಎನ್ ಆರ್ ರಮೇಶ್ ಅವರು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಬ್ಯಾಂಕ್ʼನಲ್ಲಿ ಸಾಲ ಮಾಡಿದ ವ್ಯಕ್ತಿ ಸಾವನ್ನಪ್ಪಿದ್ರೆ ಆ ಸಾಲ ತೀರಿಸೋರು ಯಾರು..? ಇಲ್ಲಿದೆ ಲೋನ್ ರೂಲ್ಸ್
ಹೌದು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಸುಮಾರು 150 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಸ್ಯಾಮ್ ಪಿತ್ರೋಡಾ ರವರು ಕಾನೂನು ಬಾಹಿರವಾಗಿ ಕಳೆದ 14 ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿಟ್ಟುಕೊಂಡು ಆ ಸ್ವತ್ತಿನಲ್ಲಿ ಪ್ರತೀ ವರ್ಷ ಕೋಟ್ಯಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರಿನಲ್ಲಿ ಏನಿದೆ?
ಒಡಿಶಾ ಮೂಲದ ಸ್ಯಾಮ್ ಪಿತ್ರೋಡಾ ಅಲಿಯಾಸ್ ಸತ್ಯನಾರಾಯಣ್ ಗಂಗಾರಾಂ ಪಿತ್ರೋಡಾ ಮುಂಬೈ ಮಹಾನಗರದ ರಿಜಿಸ್ಟ್ರಾರ್ ಆಫ್ ಕೋ – ಆಪರೇಟಿವ್ ಸೊಸೈಟೀಸ್ ಕಛೇರಿಯಲ್ಲಿ ಅಕ್ಟೋಬರ್ 23, 1991 ರಂದು “Foundation for Revitalisation of Local Health Traditions” (FRLHT) ಎಂಬ ಸಂಸ್ಥೆಯನ್ನು ನೊಂದಣಿ ಮಾಡಿಸುತ್ತಾರೆ ಹಾಗೂ ಖುದ್ದು ಸ್ಯಾಮ್ ಪಿತ್ರೋಡಾ ಅವರ ಲಿಖಿತ ರೂಪದ ಮನವಿಯಂತೆ FRLHT ಸಂಸ್ಥೆಯ ನೊಂದಣಿಯನ್ನು 2010 ರಲ್ಲಿ ರದ್ದುಗೊಳಿಸಲಾಗುತ್ತದೆ.
ಇದಾದ ನಂತರ 2008 ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಉಪ ನೊಂದಣಾಧಿಕಾರಿಗಳ ಕಛೇರಿಯಲ್ಲಿ “Foundation for Revitalisation of Local Health Traditions”ಹೆಸರಿನ Trust Deed ಅನ್ನು ಸೆಪ್ಟೆಂಬರ್ 05, 2008 ರಂದು ನೊಂದಣಿ ಮಾಡಿಸುತ್ತಾರೆ. ಇದರ ನಡುವೆ – “ಗಿಡ ಮೂಲಿಕೆ ಔಷಧಿ ಸಸಿಗಳ ಸಂರಕ್ಷಣೆ ಮತ್ತು ಸಂಶೋಧನೆ ಕಾರ್ಯ”ಕ್ಕೆ ಮೀಸಲು ಅರಣ್ಯ ಪ್ರದೇಶವನ್ನು ಗುತ್ತಿಗೆಗೆ ನೀಡುವಂತೆ 1996 ರಲ್ಲಿ ಸ್ಯಾಮ್ ಪಿತ್ರೋಡಾ ಮನವಿ ಸಲ್ಲಿಸುತ್ತಾರೆ.
ಇದಕ್ಕೆ ಕೇಂದ್ರದ ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆ (Ministry of Forest, Ecology & Environment, Govt: of India) ಯೂ ಸಹ ಅನುಮೋದನೆ ನೀಡಿತ್ತು. FRLHT ಸಂಸ್ಥೆಗೆ ನೀಡಿದ್ದ 5 ವರ್ಷಗಳ ಗುತ್ತಿಗೆ ಅವಧಿ ಮುಕ್ತಾಯದ ನಂತರ (2001ರಲ್ಲಿ) ಮುಂದಿನ 10 ವರ್ಷಗಳ ಅವಧಿಗೆ ಗುತ್ತಿಗೆಯನ್ನು ಮುಂದುವರೆಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ಆದೇಶಿಸಿತ್ತು. 2001ರ ಆದೇಶದಂತೆ ದಿನಾಂಕ 2/12/2011ಕ್ಕೆ ಸ್ಯಾಮ್ ಪಿತ್ರೋಡಾ ಅವರ FRLHT ಸಂಸ್ಥೆಗೆ ನೀಡಿದ್ದ ಗುತ್ತಿಗೆ ಅವಧಿ ಮುಕ್ತಾಯಗೊಂಡಿದೆ.
ಇದಾದ ನಂತರ ಅರಣ್ಯ ಇಲಾಖೆಯು FRLHT ಸಂಸ್ಥೆಯ ಗುತ್ತಿಗೆ ಅವಧಿಯನ್ನು ವಿಸ್ತರಿಸಿಲ್ಲ. ಆದರೂ ಸಹ 150 ಕೋಟಿ ರೂಗಳಿಗೂ ಹೆಚ್ಚು ಮೌಲ್ಯದ 12.35 ಎಕರೆ ವಿಸ್ತೀರ್ಣದದ ಸರ್ಕಾರಿ ಸ್ವತ್ತನ್ನು ರಾಜ್ಯ ಅರಣ್ಯ ಇಲಾಖೆ ತನ್ನ ವಶಕ್ಕೆ ಪಡೆದುಕೊಂಡಿಲ್ಲ ಎಂದು ಎನ್.ಆರ್.ರಮೇಶ್ ದೂರಿನಲ್ಲಿ ಆರೋಪಿಸಿದ್ದಾರೆ.