ಢಾಕಾ: ದಕ್ಷಿಣ ಬಾಂಗ್ಲಾದೇಶದ ನಿವಾಸಿಗಳ ಗುಂಪೊಂದು ಇಂದು ಬೆಳ್ಳಗ್ಗೆ ಅಲ್ಲಿನ ವಾಯುಪಡೆ ನೆಲೆಯ ಮೇಲೆ ದಾಳಿ ನಡೆಸಿದೆ. ದಾಳಿಯ ವೇಳೆ ರಕ್ಷಣೆಗಾಗಿ ಯೋಧರು ಗುಂಡು ಹಾರಿಸಿದ್ದು ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ಹಲವರು ಗಾಯಗೊಂಡರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿವೆ.
“ಕಾಕ್ಸ್ ಬಜಾರ್ನಲ್ಲಿರುವ ವಾಯುಪಡೆ ನೆಲೆಯ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ, ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.
ಪತ್ರಿಕೆಯ ವರದಿ ಪ್ರಕಾರ, ಮೋಟಾರ್ ಬೈಕ್ನಲ್ಲಿದ್ದ ವ್ಯಕ್ತಿಯೊಬ್ಬ ಹೆಲ್ಮೆಟ್ ಧರಿಸದಿದ್ದಕ್ಕಾಗಿ ವಾಯುಪಡೆಯ ಸೈನಿಕರು ಆತನನ್ನು ತಡೆದಿದ್ದರ ಪರಿಣಾಮ ವಾಗ್ವಾದದ ನಡೆದಿತ್ತು. ಈ ಬಳಿಕ ಹಿಂಸಾಚಾರ ಭುಗಿಲೆದ್ದಿತು. ಆ ವ್ಯಕ್ತಿಯ ಸಂಬಂಧಿಕರು ಮತ್ತು ನೆರೆಹೊರೆಯವರು ಬಂದು ವಾಯುನೆಲೆಯ ಮೇಲೆ ದಾಳಿ ಮಾಡಲು ಪ್ರಾರಂಭಿಸಿದರು ಎಂದು ವರದಿ ತಿಳಿಸಿದೆ.