ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಸಮಸ್ಯೆ ಇಲ್ಲದೆ ಮುಂದುವರೆಯುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಮುಟ್ಟುತ್ತಿವೆ. ಎಸ್ಸಿ/ಎಸ್ಟಿ, ಓಬಿಸಿ ಸಮುದಾಯಕ್ಕೂ ತಲುಪುತ್ತಿದೆ.
ಅವರ ಅಭಿವೃದ್ಧಿಗೆ ಆ ಹಣ ಬಳಸುವುದು ತಪ್ಪಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಸಮಸ್ಯೆ ಇಲ್ಲದೆ ಮುಂದುವರೆಯುತ್ತದೆ. ಎಲ್ಲಾ ವಿಚಾರಗಳಿಗೂ ಗ್ಯಾರಂಟಿ ಯೋಜನೆಯನ್ನೇ ಥಳಕು ಹಾಕುವುದು ಸರಿಯಲ್ಲ ಎಂದು ಹೇಳಿದರು.
ಬ್ಯಾಂಕ್ʼನಲ್ಲಿ ಸಾಲ ಮಾಡಿದ ವ್ಯಕ್ತಿ ಸಾವನ್ನಪ್ಪಿದ್ರೆ ಆ ಸಾಲ ತೀರಿಸೋರು ಯಾರು..? ಇಲ್ಲಿದೆ ಲೋನ್ ರೂಲ್ಸ್
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯವರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಈಗಾಗಲೇ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಯಾವ ರೀತಿಯಾಗಿತ್ತು ಎಂಬುದು ನಾವು ನೋಡಿದ್ದೇವೆ” ಎಂದು ತಿರುಗೇಟು ನೀಡಿದರು.