ಗದಗ : ಶೌಚಾಲಯಕ್ಕಾಗಿ ವಿದ್ಯಾರ್ಥಿನಿಯರಿಂದ ಪತ್ರದ ಚಳವಳಿ ಮೂಲಕ ಹೋರಾಟ ನಡೆಸಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹೊಸಹಳ್ಳಿ ಗ್ರಾಮದ ಶಾಲಾ ಮಕ್ಕಳು ಶೌಚಾಲಯಕ್ಕಾಗಿ 101 ಅಂಚೆಪತ್ರ ಬರೆದು ಚಳವಳಿ ನಡೆಸುವ ಮೂಲಕ ತಮ್ಮ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಒಂದು ಶೌಚಾಲಯವಿಲ್ಲ. ಶೌಚಾಲಯ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿಬೇಕು. ಸಮರ್ಪಕ ನೀರು ಮತ್ತು ಸ್ವಚ್ಛತೆಗೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸುಸಜ್ಜಿತ ಶೌಚಾಲಯ ನಿರ್ಮಿಸಬೇಕೆಂದು ವಿದ್ಯಾರ್ಥಿನಿಯರ ಒತ್ತಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಬಲ್ಡೋಟಾ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಕೊಪ್ಪಳ ಬಂದ್ ; ಪ್ರತಿಭಟನಾ ಮೆರವಣಿಗೆ
ಶೌಚಾಲಯ ನಿರ್ಮಿಸುವಂತೆ ಕಳೆದೆರಡು ವರ್ಷಗಳಿಂದ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದರೂ, ಶಿಕ್ಷಣ ಇಲಾಖೆಯಾಗಲಿ, ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳಾಗಲಿ ಕೇರ್ ಮಾಡುತ್ತಿಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಪತ್ರ ಚಳವಳಿ ಮೂಲಕ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶೌಚಾಲಯ ನಿರ್ಮಿಸುವಂತೆ ತಾಲೂಕು ಪಂಚಾಯ್ತಿ ಇಒ ಅವರಿಗೆ ಪ್ರಸ್ತಾವನೆ ಸಲ್ಲಿಸುತ್ತೇನೆ. ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿ ಪೂರ್ಣಗೊಳಿಸುವಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.