ಮಂಡ್ಯ : ಮಂಡ್ಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬೈಕ್ಗಳಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 8ಕ್ಕೂ ಹೆಚ್ಚು ಪ್ರಕರಣಗಳಿಗೆ ಸಂಬಂಧಿಸಿದಂತೆ 286 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೆಂಗಳೂರಿನಲ್ಲಿ ಕಳ್ಳತನ ಮಾಡಿದ್ದ ಬೈಕ್ ಸೇರಿದಂತೆ ಒಟ್ಟು 24.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು.
ಮಂಡ್ಯ ತಾಲೂಕಿನ ಹೊಳಲು ಗ್ರಾಮದ, ಪ್ರಸ್ತುತ ತಿ.ನರಸೀಪುರ ನಿವಾಸಿ ಶೃಂಗಾರ್ ಎಸ್. ಬಿನ್ ಶಿವಣ್ಣ (25) ಮತ್ತು ಕನ್ನಳ್ಳಿ ಗ್ರಾಮದ ಕಾರು ಚಾಲಕ ಚೇತನ್ ಎಸ್. ಬಿನ್ ಶೇಖರ್ (25) ಬಂಧಿತ ಆರೋಪಿಗಳಾಗಿದ್ದಾರೆ. ಈ ಆರೋಪಿಗಳ ವಿರುದ್ಧ ಬೆಳಕವಾಡಿ, ಮೈಸೂರಿನ ನಜರ್ಬಾದ್, ಲಕ್ಷ್ಮೀಪುರಂ, ಆಲನಹಳ್ಳಿ, ವರುಣಾ, ಕುವೆಂಪುನಗರ ಹಾಗೂ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಶೌಚಾಲಯಕ್ಕಾಗಿ ವಿದ್ಯಾರ್ಥಿನಿಯರಿಂದ ಪತ್ರದ ಚಳವಳಿ ; ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ
ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯ ನಿವಾಸಿ ಎ.ಎಸ್.ಪರಮೇಶ್ ಅವರು ತಮ್ಮ ಪತ್ನಿ ಪ್ರೇಮಾ ಅವರೊಂದಿಗೆ ಫೆ.9ರಂದು ಮೈಸೂರು ಜಿಲ್ಲೆಯ ಮುಡುಕುತೊರೆ ದೇವಸ್ಥಾನಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ, ಕೋಣನಕೊಪ್ಪಲು- ನಾರಾಯಣಪುರ ಗ್ರಾಮದ ನಡುವಿನ ರಸ್ತೆಯಲ್ಲಿ ಹಿಂದಿನಿಂದ ಬೈಕಿನಲ್ಲಿ ಬಂದು ಪ್ರೇಮಾ ಅವರ ಮಾಂಗಲ್ಯ ಸರ ಮತ್ತು ನೆಕ್ಲೇಸ್ 3.20 ಲಕ್ಷ ಮೌಲ್ಯದ ಚಿನ್ನಾಭರಣ ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ಬೆಳಕವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಡಿವೈಎಸ್ಪಿ ವಿ.ಕೃಷ್ಣಪ್ಪ ಮಾರ್ಗದರ್ಶನದಲ್ಲಿ ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಬಿ.ಎಸ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ, ಕಿರುಗಾವಲು ಠಾಣೆಯ ಸಬ್ಇನ್ಸ್ಪೆಕ್ಟರ್ ರವಿಕುಮಾರ್ ಡಿ. ಮತ್ತು ಹಲಗೂರು ವೃತ್ತದ ಅಪರಾಧ ಪತ್ತೆ ದಳ ತಂಡ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.