ಬೆಂಗಳೂರು:-ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಶೀಘ್ರದಲ್ಲಿಯೇ ಎಸ್ಕಾಂಗಳು ಅಂತ್ಯ ಹಾಡಲಿವೆಯೇ? ಇಂತಹದೊಂದು ಅನುಮಾನಕ್ಕೆ ಕೆಲವು ವರದಿಗಳು ಕಾರಣವಾಗಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಹೇಳಿಕೆ ನೀಡಿದ್ದು, ಸರ್ಕಾರ ನಮಗೆ ಪ್ರತಿ ತಿಂಗಳೂ ಮುಂಗಡ ಹಣ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಿಮ್ಮ ಮುಖ ಪಳಪಳನೆ ಹೊಳೆಯಬೇಕಾ!? ಹಾಗಿದ್ರೆ ಅರಿಶಿನ ಜೊತೆ ಈ ಒಂದು ವಸ್ತು ಹಾಕಿ!
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಮಾತನಾಡಿ, ಗೃಹ ಜ್ಯೋತಿ ಯೋಜನೆಗೆ ಮುಂಗಡ ಅನುದಾನ ನಮಗೆ ನೀಡಲಾಗಿದೆ. ಈ ಯೋಜನೆ ಸಂಬಂಧ ನಮ್ಮಲ್ಲಿ ಮುಂಗಡ 50 ಕೋಟಿ ರೂ. ಇದೆ. ಸರ್ಕಾರ ಮುಂಗಡ ಹಣ ಕೊಡದೇ ಇದ್ದಲ್ಲಿ ಗ್ರಾಹಕರು ಕೊಡಬೇಕು. ಆದರೆ ಸರ್ಕಾರ ನಮಗೆ ಪ್ರತಿ ತಿಂಗಳೂ ಮುಂಗಡ ಹಣ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ. ರಾಜ್ಯ ಸರ್ಕಾರ ಉಚಿತ ಯೋಜನೆಗಳ ಸಬ್ಸಿಡಿ ಹಣ ಕೊಡದೇ ಇದ್ದಲ್ಲಿ, ಕೆಇಆರ್ಸಿ ನಿಯಮಗಳ ಪ್ರಕಾರ ನಾವು ಹಣ ವಸೂಲಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳಿಗೆ ಹಣ ಒದಗಿಸಲು ಪರದಾಡುವಂತಾಗಿದೆ. ಹೀಗಾಗಿ ಗೃಹಜ್ಯೋತಿ ಯೋಜನೆಯ ಹಣವನ್ನು ಎಸ್ಕಾಂಗಳಿಗೆ ನೀಡಲು ಸಾಧ್ಯವಾಗಿಲ್ಲ ಈ ನಿಟ್ಟಿನಲ್ಲಿ ಎಸ್ಕಾಂ ಗಳು ಸಾರ್ವಜನಿಕರಿಂದಲೇ ಹಣ ವಸೂಲಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿರುವುದಾಗಿ ವರದಿಯಾಗಿದೆ