ಕೋಲಾರ:- ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿ ಒಂಟಿ ಆನೆ ದಾಳಿಗೆ ರೈತ ಮಹಿಳೆಯೊಬ್ಬರು ಬಲಿಯಾದ ಘಟನೆ ಜರುಗಿದೆ.
ಗ್ಯಾಸ್ ಸೋರಿಕೆ: ಸಿಲಿಂಡರ್ ಸ್ಪೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲು!
44 ವರ್ಷದ ಮಂಜುಳ ದಾಳಿಯಿಂದ ಮೃತಪಟ್ಟ ಮಹಿಳೆ. ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿ ಘಟನೆ ನಡೆದಿದೆ. ಮಂಜುಳ ಮೂತ್ರ ವಿಸರ್ಜನೆಗೆಂದು ಮುಂಜಾನೆ 4 ಗಂಟೆ ಸುಮಾರಿಗೆ ಮನೆಯಿಂದ ಹೊರಹೋದ ವೇಳೆ ಒಂಟಿ ಸಲಗ ದಾಳಿ ನಡೆಸಿದೆ.
ಘಟನೆಯಿಂದ ಸಾಕರಸನಹಳ್ಳಿ ಸೇರಿದಂತೆ ಕಾಡಂಚಿನ ಗ್ರಾಮಗಳ ರೈತರಲ್ಲಿ ಆತಂಕ ಮನೆಮಾಡಿದೆ.