ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸದ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ನಟ ದರ್ಶನ್ ಪರವಾಗಿ ವಾದಿಸಲು ಖ್ಯಾತ ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ನ ನ್ಯಾಯವಾದಿ ಕಪಿಲ್ ಸಿಬಲ್ ಒಪ್ಪಿಕೊಂಡಿದ್ದಾರೆ.
ಈ ಮಧ್ಯೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಹಾಜರಾಗಬೇಕಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಆರ್.ಆರ್. ನಗರದ ದರ್ಶನ್ ಮನೆ ಮುಂದೆ ಅಂಗರಕ್ಷಕರು ಜಮಾಯಿಸಿದ್ದು, ಮನೆ ಮುಂದೆ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.
ಚಾಣಕ್ಯನ ಪ್ರಕಾರ ಹೆಂಡತಿ ತನ್ನ ಗಂಡನ ಈ ಕೆಟ್ಟ ಅಭ್ಯಾಸಗಳನ್ನು ಮುಚ್ಚಿಡಬಾರದು..!
ಆದ್ದರಿಂದ ಆರ್.ಆರ್. ನಗರದ ಮನೆಯಲ್ಲಿಯೇ ದರ್ಶನ್ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಜಾಮೀನಿನ ಮೂಲಕ ಹೊರಬಂದಿರುವ ಡಿ ಗ್ಯಾಂಗ್ ಇಂದು ಕೋರ್ಟ್ ವಿಚಾರಣೆ ಎದುರಿಸಲಿದ್ದಾರೆ.