ನವದೆಹಲಿ: NDA ಸರ್ಕಾರ ಯಾವಾಗಲೂ ರೈತರ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಹಾರದ ಭಾಗಲ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ಬಿಹಾರದಲ್ಲಿ ಎನ್ಡಿಎ ಸರ್ಕಾರ ಯಾವಾಗಲೂ ರೈತರ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ. ಈ ಸರ್ಕಾರ ಅಧಿಕಾರದಲ್ಲಿಲ್ಲದಿದ್ದರೆ,
ದೇಶಾದ್ಯಂತ ನನ್ನ ರೈತ ಸಹೋದರ ಸಹೋದರಿಯರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನಗಳನ್ನು ಪಡೆಯುತ್ತಿರಲಿಲ್ಲ. ಸರ್ಕಾರದ ಪ್ರಯತ್ನಗಳಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಭಾರತದ ಕೃಷಿ ರಫ್ತು ಗಮನಾರ್ಹವಾಗಿ ಹೆಚ್ಚಾಗಿದೆ ಎಂದಿದ್ದಾರೆ.
ಚಾಣಕ್ಯನ ಪ್ರಕಾರ ಹೆಂಡತಿ ತನ್ನ ಗಂಡನ ಈ ಕೆಟ್ಟ ಅಭ್ಯಾಸಗಳನ್ನು ಮುಚ್ಚಿಡಬಾರದು..!
ನಮ್ಮ ಸರ್ಕಾರದ ಅವಧಿಯಲ್ಲಿ ಹಲವಾರು ಕೃಷಿ ಉತ್ಪನ್ನಗಳನ್ನು ಮೊದಲ ಬಾರಿಗೆ ರಫ್ತು ಮಾಡಲಾಗಿದೆ. ಈಗ, ಬಿಹಾರದ ಮಖಾನಾ (ಫಾಕ್ಸ್ನಟ್) ಆ ಅವಕಾಶ ಸಿಕ್ಕಿದೆ. ಇದು ಜಾಗತಿಕ ಮಾರುಕಟ್ಟೆಗಳನ್ನು ತಲುಪಬೇಕಾದ ಸೂಪರ್ಫುಡ್ ಆಗಿದೆ. ಈ ವರ್ಷದ ಬಜೆಟ್ನಲ್ಲಿ, ಸರ್ಕಾರವು ಮಖಾನಾ ಮಂಡಳಿಯನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಅದನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದಿದ್ದಾರೆ.