ಬೆಳಗಾವಿ: ಪ್ರತಿಯೊಬ್ಬ ಮರಾಠಿಗನ ಬಾಯಿಯಿಂದಲೂ ಕರ್ನಾಟಕಕ್ಕೆ ಜೈ ಎನಿಸುವ ಕಾಲ ಬೇಗ ಬರುತ್ತದೆ ಎಂದು ಕರವೇ ನಾರಾಯಣಗೌಡ ಹೇಳಿದ್ದಾರೆ. ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಒಬ್ಬ ಚಾಲಕ, ನಿರ್ವಾಹಕರನ್ನು ಬಸ್ನಿಂದ ಕೆಳಗಿಳಿಸಿ ಬಣ್ಣ ಹಾಕಿ, ಅವರಿಗೆ ಹಾರ ಹಾಕಿ ಜೈ ಮಹಾರಾಷ್ಟ್ರ ಅಂತಾ ಘೋಷಣೆ ಕೂಗಿಸುತ್ತೀರಿ.
ಇಡೀ ಬೆಳಗಾವಿಯಲ್ಲಿರುವ ಪ್ರತಿಯೊಬ್ಬ ಮರಾಠಿಗನ ಬಾಯಿಯಿಂದಲೂ ಕರ್ನಾಟಕಕ್ಕೆ ಜೈ ಎನಿಸುವ ಕಾಲ ಬೇಗ ಬರುತ್ತದೆ. ಇದನ್ನೆಲ್ಲ ಬಿಟ್ಟು ಬಿಡಿ. ಬೆಳಗಾವಿಯಲ್ಲಿ ಎಂಇಎಸ್ ಸಂಪೂರ್ಣ ಅಂತ್ಯವಾಗಿದೆ. ಆ ಹೊಟ್ಟೆ ಉರಿಗೆ ಇಂಥ ಆಟ ಶುರು ಮಾಡಿದ್ದಾರೆ.
ಚಾಣಕ್ಯನ ಪ್ರಕಾರ ಹೆಂಡತಿ ತನ್ನ ಗಂಡನ ಈ ಕೆಟ್ಟ ಅಭ್ಯಾಸಗಳನ್ನು ಮುಚ್ಚಿಡಬಾರದು..!
ಬೆಳಗಾವಿ ಅಷ್ಟೇ ಅಲ್ಲದೇ ಇಡೀ ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಬೆಳಗಾವಿಗೆ ನಾನು ಬಂದಷ್ಟು ಯಾವ ಕರ್ನಾಟಕದ ಮುಖ್ಯಮಂತ್ರಿ, ಸಚಿವರೂ ಬಂದಿಲ್ಲ. ಬೆಳಗಾವಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ, ಸರ್ಕಾರದ ಮೇಲೆ ನನ್ನಷ್ಟು ಒತ್ತಡ ಬೇರೆ ಯಾರೂ ಹಾಕಿಲ್ಲ ಎಂದರು.