ಬೆಂಗಳೂರು: ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಸಹ ಹಾಕುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ, ವನ್ಯಜೀವಿ ಮಾನವ ಸಂಘರ್ಷ ಇಂದು ನಿನ್ನೆಯ ಸಮಸ್ಯೆಯಲ್ಲ.
ಸಾವಿರಾರು ವರ್ಷಗಳಿಂದಲೂ ಇದೆ. ಅರಣ್ಯ ಪ್ರದೇಶ ಕ್ಷೀಣಿಸುತ್ತಿದ್ದು, ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಸಮಸ್ಯೆ ಉಲ್ಬಣವಾಗುವಂತೆ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ಸರ್ಕಾರ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಿ, ನಿರ್ವಹಿಸುತ್ತಿರುವುದರ ಜೊತೆಗೆ ರೈಲ್ವೆ ಬ್ಯಾರಿಕೇಡ್ ಸಹ ಹಾಕುತ್ತಿದೆ.
ದಿನಕ್ಕೆ ಕೇವಲ 70 ರೂ. ಹೂಡಿಕೆಯಿಂದ 3 ಲಕ್ಷ ರೂ. ಗಳಿಸಿ: ಅಂಚೆ ಕಚೇರಿಯ ಬೆಸ್ಟ್ ಸ್ಕೀಮ್ ಇದು!
2024-25ನೇ ಸಾಲಿನಲ್ಲಿ 78.917 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದ್ದು, 41.87 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 103 ಕಿ.ಮೀ. ಗುರಿ ನಿಗದಿ ಮಾಡಲಾಗಿದ್ದು, ಮಾರ್ಚ್ 31ರೊಳಗೆ ಈ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.