ಕಲಬುರಗಿ: ಪ್ರತಿ ವರ್ಷವು ಶಿವರಾತ್ರಿಯಲ್ಲಿ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ ವಿವಾದ ಶುರುವಾಗುತ್ತದೆ.. ಅದರಂತೆ ಈ ವರ್ಷವು ಸಹ ವಿವಾದಿತ ಲಾಡ್ಲೇ ಮಶಾಕ್ ದರ್ಗಾದ ಆವರಣದಲ್ಲಿರುವ ಶಿವಲಿಂಗ ಪೂಜೆಗೆ ಹಿಂದೂ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ,
ಹೌದು, ವಿವಾದಿತ ಲಾಡ್ಲೇ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಕೋರ್ಟ್ ಕೂಡ ಸಮ್ಮತಿ ನೀಡಿದೆ. ಹೀಗಾಗಿ ಶಿವರಾತ್ರಿಯಂದು ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಹಿಂದೂಗಳು ಉತ್ಸುಕರಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಿದ್ದಾರೆ. ಮೊದಲಿಗೆ ಪೂಜೆಗೆ ದರ್ಗಾಕ್ಕೆ ತೆರಳುವ 15 ಜನರ ಪಟ್ಟಿಯನ್ನು ಪೊಲೀಸರಿಗೆ ನಿಡಲಾಗುತ್ತದೆ. ಮಧ್ಯಾಹ್ನದ ಬಳಿಕ ಹಿಂದೂ ಕಾರ್ಯಕರ್ತರು ಶಿವಲಿಂಗ ಪೂಜೆ ನಡೆಸಲಿದ್ದಾರೆ.
Maha Shivratri 2025: ಮಹಾಶಿವರಾತ್ರಿ ಹಬ್ಬದ ಪೂಜಾ ಮುಹೂರ್ತ, ಇತಿಹಾಸ ಮತ್ತು ಮಹತ್ವ ತಿಳಿಯಿರಿ!
ಇನ್ನೂ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಸಮ್ಮತಿ ನೀಡಿದ ಹಿನ್ನೆಲೆ ಆಳಂದ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಬಂದೋಬಸ್ತ್ ನಿಯೋಜಿಸಲಾಗಿದೆ.