ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಇಡೀ ಅರಣ್ಯ ಹೊತ್ತುರಿದಿದ್ದು, ಅಪಾರ ಅರಣ್ಯ ಸಂಪತ್ತು ನಾಶವಾಗಿದೆ.
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಹತ್ತಾರು ಎಕರೆ ಅಗ್ನಿಗಾಹುತಿ!
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರೂ, ಬೆಂಕಿ ತಹಬದಿಗೆ ಬರಲೇ ಇಲ್ಲ. ಗಾಳಿಯ ವೇಗ ಜೋರಾಗಿದ್ದರಿಂದಲೇ ಬೆಂಕಿ ಕೆನ್ನಾಲಿಗೆ ವ್ಯಾಪಿಸುತ್ತಲೇ ಹೋಯಿತು. ಕೊನೆಗೂ ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.