ಬೆಂಗಳೂರು: ನಾಡಿನಾದ್ಯಂತ ಇಂದು ಮಹಾ ಶಿವರಾತ್ರಿ ಹಬ್ಬದ ಸಂಭ್ರಮ-ಸಡಗರ. ನಸುಕಿನ ಜಾವದಿಂದಲೇ ಶಿವನ ದೇವಾಲಯಗಳಲ್ಲಿ ರುದ್ರಾಭಿಷೇಕ, ಶಿವನಿಗೆ ವಿಶೇಷ ಅಭಿಷೇಕ ಆರಂಭವಾಗಿದೆ.
ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಶಿವನ ದೇವಸ್ಥಾನದಲ್ಲಿ ಹಬ್ಬದ ಆಚರಣೆ, ಸಂಭ್ರಮ ಜೋರಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನಿಗೆ ವಿಶೇಷ ಪೂಜೆ, ಪ್ರಾರ್ಥನೆ, ನೈವೇದ್ಯ, ರುದ್ರಾಭಿಷೇಕ ಮಾಡಿಸುತ್ತಿದ್ದಾರೆ.
Maha Shivratri 2025: ಮಹಾಶಿವರಾತ್ರಿ ಹಬ್ಬದ ಪೂಜಾ ಮುಹೂರ್ತ, ಇತಿಹಾಸ ಮತ್ತು ಮಹತ್ವ ತಿಳಿಯಿರಿ!
ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಧಾರ್ಮಿಕ ಪೂಜಾ ಕಾರ್ಯಗಳು ಆರಂಭವಾಗಿದ್ದು, ಗಂಗಾಜಲ ಅಭಿಷೇಕ, ಫಲಪಂಚಾಮೃತಾಭಿಷೇಕ ಹಾಗೂ ಮಹಾನ್ಯಾಸಪೂರ್ವಕ ಏಕಾದಶವಾರ ರುದ್ರಾಭಿಷೇಕ ನೆರವೇರಿಸಿ,
ನಂತರ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇಂದು ದಿನವಿಡೀ ಶಿವನಿಗೆ ರುದ್ರಾಭಿಷೇಕ, ರುದ್ರ ಪಾರಾಯಣ ನೆರವೇರಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ.