ಉತ್ತರ ಕನ್ನಡ : ಜಿಲ್ಲೆಯ ಹೊನ್ನಾವರದ ಕಾಸರಕೋಡದಲ್ಲಿ ಬಂದರು ರಸ್ತೆ ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ 50 ಜನರನ್ನು ಬಂಧಿಸಲಾಗಿದೆ.
ಹೊನ್ನಾವರ ಕಾಸರುಗೋಡಿನಲ್ಲಿ ಬಂದರು ಇಲಾಖೆಯ ಜಾಗದಲ್ಲಿ ಅನಧಿಕೃತ ಹೋಮ್ ಸ್ಟೇಗಳು, ಹೋಟಲ್, ಅಕ್ರಮವಾಗಿ ಮನೆಗಳ ನಿರ್ಮಾಣ ಆಗಿದ್ದ ಹಿನ್ನಲೆಯಲ್ಲಿ ರಸ್ತೆ ಸರ್ವೇಕಾರ್ಯಕ್ಕೆ 10 ವರ್ಷಗಳಿಂದ ವಿಳಂಬವಾಗುತ್ತಲೇ ಬರುತ್ತಿತ್ತು. ಇವುಗಳನ್ನು ತೆರವು ಮಾಡಿ ರಸ್ತೆ ನಿರ್ಮಾಣ ಮಾಡಬೇಕಿತ್ತು. ಹೀಗಾಗಿ ಕಲಂ 163 ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಕಾಸರಕೋಡಿನಲ್ಲಿ ಏಕಾ ಏಕಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಸಹ ಬಳಸಿಕೊಳ್ಳಲಾಗಿತ್ತು.
ರೈತರ ವಿರೋಧದ ಮಧ್ಯೆಯೂ ಆಲಮಟ್ಟಿ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ
ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಲಾಮಕ್ಕಳನ್ನು ಪ್ರತಿಭಟನೆಗೆ ಪ್ರಚೋದಿಸಿದಂತೆ ಐದು ಪ್ರತ್ತೇಕ ಪ್ರಕರಣವನ್ನು ದಾಖಲು ಮಾಡಲಾಗಿದೆ. ಶಾಲಾ ಮಕ್ಕಳಿಗೆ ಪ್ರಚೋಧನೆ ಮಾಡಿ ಪ್ರತಿಭಟನೆಗೆ ಬರುವಂತೆ ಮಾಡಿದವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ , BNS ಕಲಂ 163 ಉಲ್ಲಂಘನೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ತಪ್ಪು ಸಂದೇಶ ಹಬ್ಬಿಸಿದವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ. ಹೊನ್ನಾವರದ ಕಾಸರಕೋಡಿನಲ್ಲಿ ಇಂದೂ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ.