ಬೆಳಗಾವಿ : ನಾಡಿನೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ ಜೋರಾಗಿದೆ. ಶಿವ ದೇಗುಲಗಳಲ್ಲಿ ಬೆಳಗ್ಗಿನಿಂದಲೇ ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿ ನಗರದ ಕಪಿಲೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತ ಹೆಬ್ಬಾಳಕರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಚಿವೆ ಹೆಬ್ಬಾಳಕರಗೆ ತಾಯಿ, ಸಹೋದರ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಪುತ್ರ ಮೃಣಾಲ್ ಸೇರಿದಂತೆ ಕುಟುಂಬಸ್ಥರು ಸಾಥ್ ನೀಡಿದ್ದು, ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯವರು ಸಚಿವೆ ಹೆಬ್ಬಾಳ್ಕರ್ಗೆ ಸನ್ಮಾನ ಮಾಡಿದರು.
ಇನ್ನೂ ಹುಬ್ಬಳ್ಳಿಯ ಜಿಮ್ಖಾನ ಮೈದಾನದಲ್ಲಿ ಕಾಶಿ ವಿಶ್ವನಾಥ ಮಾದರಿಯ ಶಿವಲಿಂಗ ನಿರ್ಮಾಣ ಮಾಡಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ವಿಶೇಷ ಪೂಜೆ ಸಲ್ಲಿಸಿ, ಅಭಿಷೇಕ ನೆರವೇರಿಸಿದರು. ಈ ವೇಳೆ ಮೇಯರ್ ರಾಮಣ್ಣ ಬಡಿಗೇರ ಸೇರಿದಂತೆ ಹಲವು ಪಾಲಿಕೆ ಸದಸ್ಯರು ಭಾಗಿಯಾಗಿದ್ದರು. ಕ್ಷಮತ ಸಂಸ್ಥೆ, ಪ್ರಹ್ಲಾದ್ ಜೋಶಿ ಅವರ ಪ್ರಯೋಜಕತ್ವದಲ್ಲಿ ಶಿವರಾತ್ರಿ ಸಂಭ್ರಮ ನಡೆಯುತ್ತಿದ್ದು, ಸಂಜೆ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.