ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಅಶ್ಲೀಲ ಸನ್ನೆ ತೋರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಚಾಮರಾಜಪೇಟೆ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹರ್ಷ ಬಂಧಿತ ಆರೋಪಿಯಾಗಿದ್ದು, ನಿನ್ನೆ ಸಂಜೆ ಗೋಪಾಲನ್ ಮಾಲ್ ಬಳಿ ಟ್ರಾಫಿಕ್ ನಿಯಮ ಉಲ್ಲಂಘಿಸಿ ಕಾರು ಚಾಲನೆ ಮಾಡುತ್ತಿದ್ದ ಹರ್ಷನನ್ನು ಈ ಬಗ್ಗೆ ಅಕ್ಷತಾ ರವಿಕುಮಾರ್ ಪ್ರಶ್ನಿಸಿದ್ದಾರೆ.
Bilwa Leaves: ಶಿವನಿಗೆ ಇಷ್ಟವಾದ ಬಿಲ್ವಪತ್ರೆಯಲ್ಲಿದೆ ಸಾಕಷ್ಟು ಆರೋಗ್ಯ ಪ್ರಯೋಜನಗಳು..!
ಈ ವೇಳೆ ಕಾರು ಚಾಲಕ ಹರ್ಷ ಅಶ್ಲೀಲವಾಗಿ ಸನ್ನೆ ಮಾಡಿದ್ದ ಎನ್ನಲಾಗಿದೆ. ಹರ್ಷ ಅಶ್ಲೀಲವಾಗಿ ಸನ್ನೆ ಮಾಡಿದ್ದನು. ಈ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.