ಬೆಂಗಳೂರು: ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಸ್ವಾಭಿಮಾನಿ ಕನ್ನಡಿಗರು ಪಾಠ ಕಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ, ಈಗ ನೀರು ಬಿಡುಗಡೆ ಮಾಡುವುದರಿಂದ ರಾಜ್ಯಕ್ಕೆ ತೊಂದರೆ ಉಂಟಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದರೂ, ರೈತ ಸಂಘಟನೆಗಳ ವಿರೋಧದ ನಡುವೆಯೂ, ನೀವಿನ್ನು ನಿಮ್ಮ ರಾಜಕೀಯ ಲಾಭಕ್ಕಾಗಿ ತೆಲಂಗಾಣಕ್ಕೆ ನೀರು ಬಿಡುಗಡೆ ಮಾಡುತ್ತಿದ್ದೀರಿ.
Bilwa Leaves: ಶಿವನಿಗೆ ಇಷ್ಟವಾದ ಬಿಲ್ವಪತ್ರೆಯಲ್ಲಿದೆ ಸಾಕಷ್ಟು ಆರೋಗ್ಯ ಪ್ರಯೋಜನಗಳು..!
ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಮೆಚ್ಚಿಸಲು ನೀವು ತೆಲಂಗಾಣ ಕಾಂಗ್ರೆಸ್ ನಾಯಕರೊಂದಿಗೆ ಯಾವುದೇ ರಹಸ್ಯ ಒಪ್ಪಂದಗಳನ್ನು ಮಾಡಿಕೊಂಡಿದ್ದೀರಾ?’ ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ರೈತರು ಮತ್ತು ಸಾಮಾನ್ಯ ಜನರ ಹಿತಾಸಕ್ತಿಗಳನ್ನು ರಕ್ಷಿಸುವುದಕ್ಕಿಂತ ನಿಮ್ಮ ರಾಜಕೀಯ ಸ್ವಾರ್ಥ ಮುಖ್ಯವೇ? ಕರ್ನಾಟಕದ ನೀರನ್ನು ತೆಲಂಗಾಣಕ್ಕೆ ಬಿಡಲು ನೀವು ಯಾವ ಅಧಿಕಾರದ ಮೇಲೆ ಅನುಮತಿ ನೀಡಿದ್ದೀರಿ?. ಇತರ ರಾಜ್ಯಗಳಿಗೆ ನೀರು ಹರಿಸುವ ಮೂಲಕ ಕನ್ನಡಿಗರಿಗೆ ನೀರನ್ನು ನಿರಾಕರಿಸಿದ್ದಕ್ಕಾಗಿ ಈ ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಸ್ವಾಭಿಮಾನಿ ಕನ್ನಡಿಗರು ಪಾಠ ಕಲಿಸಬೇಕು’ ಎಂದರು.