ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ.
ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದು..! ಹೇಗೆ ಗೊತ್ತಾ..?
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.