ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಹಿನ್ನೆಲೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಲಾಗಿದೆ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದು..! ಹೇಗೆ ಗೊತ್ತಾ..?
ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.
http://youtube.com/post/Ugkxdaq_Ytd01qElqUpaqNkQyEkk15HhCvIb?si=GoAXu8ge22DSnWPh
ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.