ವಿಜಯಪುರ : ತೆಲಂಗಾಣ ರಾಜ್ಯಕ್ಕೆ ನೀರು ಬಿಡುಗಡೆ ಮಾಡಿರುವ ಸರ್ಕಾರದ ವಿರುದ್ಧ ವಿಜಯಪುರ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ನೀರಿನ ಸಮಸ್ಯೆ ಇದ್ದರು ರಾತ್ರೋರಾತ್ರಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ ನೀರು ಬಿಡುಗಡೆಗೆ ಮಾಡಿರುವುದನ್ನು ಖಂಡಿಸಿ, ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಇನ್ನೂ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ವಿರೋಧದ ಮಧ್ಯೆಯೂ ಆಲಮಟ್ಟಿ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ
ಕಳೆದ ನಾಲ್ಕೈದು ದಿನಗಳಿಂದ ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಿಂದ ನೆರೆಯ ತೆಲಂಗಾಣಕ್ಕೆ ರಾತ್ರೋರಾತ್ರಿ ನೀರು ಬಿಡಲಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.