ಉತ್ತರ ಪ್ರದೇಶ: ಪತ್ನಿಯ ಕಿರುಕುಳದಿಂದ ಐಟಿ ಕಂಪನಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್)ನಲ್ಲಿ ಉದ್ಯೋಗಿಯಾಗಿದ್ದ ಮಾನವ್ ಶರ್ಮಾ ಫೆ.24 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿಟ್ಟು ಪತ್ನಿ ವಿರುದ್ಧ ಆರೋಪ ಮಾಡಿದ್ದಾರೆ.
ಕುತ್ತಿಗೆಗೆ ಕುಣಿಕೆ ಬಿಗಿದಿದ್ದ ಶರ್ಮಾ ಸುಮಾರು ಏಳು ನಿಮಿಷಗಳ ಕಾಲದ ಒಂದು ಭಯಾನಕ ವೀಡಿಯೊವನ್ನು ಮಾಡಿದ್ದಾರೆ. ಅದರಲ್ಲಿ ಅವರು ತಮ್ಮ ಪತ್ನಿ ಇನ್ನೊಬ್ಬ ಪುರುಷನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿದ್ದಾರೆ.
ಕಾನೂನು ಪುರುಷರನ್ನು ರಕ್ಷಿಸಬೇಕು. ಇಲ್ಲದಿದ್ದರೆ ದೂಷಿಸಲು ಪುರುಷರೇ ಇಲ್ಲದ ಸಮಯ ಬರುತ್ತದೆ. ನನ್ನ ಹೆಂಡತಿ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು. ಹೀಗಿದ್ದಾಗ, ನಾನು ಏನು ಮಾಡಬಹುದು ಎಂದು ಪ್ರಶ್ನಿಸಿದ್ದಾರೆ.
ನನಗೆ ಸಾಯುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾನು ಹೋಗಬೇಕು. ದಯವಿಟ್ಟು ಗಂಡಸರ ಬಗ್ಗೆ ಯೋಚಿಸಿ. ಕ್ಷಮಿಸಿ, ಎಲ್ಲರೂ. ದಯವಿಟ್ಟು ಯಾರಾದರೂ ಪುರುಷರ ಬಗ್ಗೆ ಮಾತನಾಡಬೇಕು. ಅವರು ಒಂಟಿಯಾಗುತ್ತಾರೆ. ನಾನು ಹೋದ ನಂತರ ಎಲ್ಲವೂ ಸರಿಯಾಗುತ್ತದೆ. ನಾನು ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ ಎಂದು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.