ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥದಲ್ಲಿ ಶುಕ್ರವಾರ ಭಾರಿ ಹಿಮಪಾತ ಸಂಭವಿಸಿದ್ದು, ಸೇನಾ ಚಲನವಲನವನ್ನು ಬೆಂಬಲಿಸಲು ಹಿಮ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ 57 ಕಾರ್ಮಿಕರು ಸಿಲುಕಿಕೊಂಡಿದ್ದರು. ಇಲ್ಲಿಯವರೆಗೆ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಬೀಟ್ ರೂಟ್ ಸೇವಿಸುವುದರಿಂದ ನೀವು ದಪ್ಪ, ಉದ್ದ ಕೂದಲನ್ನು ಪಡೆಯಬಹುದು..!
ಈಗಾಗಲೇ ರಕ್ಷಣೆ ಮಾಡಲಾದ ಕಾರ್ಮಿಕರನ್ನು ಹೆಲಿಕಾಪ್ಟರ್ ಮೂಲಕ ಜೋಶಿ ಮಠದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಮದಡಿ ಸಿಲುಕಿರುವ ಉಳಿದ ಕಾರ್ಮಿಕರ ರಕ್ಷಣೆಗೆ ಸೇನಾ ಕಾರ್ಯಾಚರಣೆ ಮುಂದುವರಿದಿದೆ.
ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ಅಗತ್ಯ ನೆರವಿನ ಭರವಸೆಯನ್ನೂ ನೀಡಿದ್ದಾರೆ.