ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೈಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಇಂದು ಬೆಳಗ್ಗೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕ ಇಂದುವಾಡಿ ಬಳಿ ಅಪಘಾತ ಸಂಭವಿಸಿದೆ. ಮೃತರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೈಸೂರಿನ ಲಿಖಿತ, ಶ್ರೀಲಕ್ಷ್ಮಿ, ಮಂಡ್ಯದ ಸುಹಾಸ್, ಶ್ರೇಯಸ್, ನಿತಿನ್ ಎಂಬುವರು ಮಾರುತಿ ಸುಜುಕಿಯಲ್ಲಿ ಮಲೆ ಮಹದೇಶ್ವರ ಬೆಟ್ಟದ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗುದೆ. ಈ ವೇಳೆ ಎದುರಿಗೆ ಬಂದ ಟಿಪ್ಪರ್ ಮುಖಾಮುಖಿ ಡಿಕ್ಕಿ ಯಾಗಿ ಅಪಘಾತ ಸಂಭವಿಸಿದೆ.
ವಿಷಯ ತಿಳಿದ ಕೊಳ್ಲೇಗಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿ ರಸ್ತೆ ಸಂಚಾರಕ್ಕೆ ಅನುವು ಮಾಡಿದರು. ಘಟನೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.