ಬೆಂಗಳೂರು: ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಗಲಾಟೆ ಕೇಸ್ ಈಗಾಗಲೇ ಅಂತ್ಯ ಆಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಸಿ.ಟಿ. ರವಿ ನಡುವೆ ನಡೆದ ಘಟನೆ ಈಗಾಗಲೇ ಅಂತ್ಯಗೊಂಡಿದೆ.
ಡಿಸೆಂಬರ್ 19 ರಂದೇ ಅದನ್ನು ನಾನು ಅಂತ್ಯಗೊಳಿಸಿದ್ದೇನೆ. ಅದು ಈಗ ಪರಿಷತ್ ನ ಎಥಿಕ್ಸ್ ಸಮಿತಿ ಮುಂದೆ ಇದೆ. ಎಥಿಕ್ಸ್ ಸಮಿತಿ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.
March 1st New Rules: ಗ್ರಾಹಕರೇ ಗಮನಿಸಿ.. ಇಂದಿನಿಂದ ಬದಲಾಗಲಿವೆ ಈ ನಿಯಮಗಳು..!
ಎಥಿಕ್ಸ್ ಕಮಿಟಿ ವರದಿ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡುತ್ತೇನೆ. ಒಂದು ತಿಂಗಳಲ್ಲಿ ವರದಿ ಕೊಡಲು ಹೇಳಿದ್ದೇನೆ. ಈ ವಿಷಯ ಸದನದಲ್ಲಿ ಚರ್ಚೆ ಆಗುವುದಿಲ್ಲ. ಎಥಿಕ್ಸ್ ಕಮಿಟಿಯಲ್ಲಿ ಸಿ.ಟಿ ರವಿ ಇದ್ದರೂ, ಈಗ ಅವರದ್ದೇ ಕೇಸ್ ಬಂದಿರೋದ್ರೀಂದ ಅವರನ್ನು ಎಥಿಕ್ಸ್ ಕಮಿಟಿಯಿಂದ ಕೈ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಸದನದಲ್ಲಿ ಮುಗಿದದ್ದನ್ನ ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗ್ತಿರಲಿಲ್ಲ. ಸದನ ನಡಯದೇ ಇದ್ದಾಗ ಇದು ನಡೆದಿರೋದಕ್ಕೆ ಇಷ್ಟು ದೊಡ್ಡದು ಆಗಿದೆ. ಹೀಗಾಗಿ ಎಥಿಕ್ಸ್ ಕಮಿಟಿಗೆ ಕೊಡಲಾಗಿದೆ. ಎಥಿಕ್ಸ್ ಕಮಿಟಿ ವರದಿ ಕೊಡಲಿ ನೋಡೋಣ. ಎಥಿಕ್ಸ್ ಕಮಿಟಿಯಲ್ಲಿಯೇ 99% ಸಮಸ್ಯೆ ಪರಿಹಾರ ಆಗೋ ವಿಶ್ವಾಸ ಇದೆ. ಇಲ್ಲದೇ ಹೋದ್ರೆ ಎಥಿಕ್ಸ್ ಕಮಿಟಿ ವರದಿಯನ್ನು ಅಧಿವೇಶನದಲ್ಲಿ ಮಂಡನೆ ಮಾಡ್ತೀವಿ ಎಂದು ತಿಳಿಸಿದ್ದಾರೆ.