ಬೀದರ್ : ಬೀದರ್ ಜಿಲ್ಲಾಡಳಿತ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಬೆಂಗಳೂರು ಪಾರಂಪರಿಕ ವೈದ್ಯ ಪರಿಷತ್ ಕರ್ನಾಟಕ (ರಿ) ಬೆಂಗಳೂರು ಹಾಗೂ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ (ರಿ) ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ಪಾರಂಪರಿಕ ವೈದ್ಯ ಸಮ್ಮೇಳನ ನಡೆಯಲಿದೆ.
ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ 15ನೇ ಕರ್ನಾಟಕ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಇಂದು ಸಮ್ಮೇಳನದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಾಥಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ವೈದ್ಯರಾದ ಡಾ. ರಜನೀಶ್ ವಾಲಿಯವರು ಜಾಥಾಗೆ ಚಾಲನೆ ನೀಡಿದರು.
ಮಂತ್ರಾಲಯದಲ್ಲಿ ಗುರು ವೈಭವೋತ್ಸವ ; ರಾಯರ ದರ್ಶನ ಪಡೆದ ಆಂಧ್ರ ಪ್ರದೇಶ ಸಚಿವ ನಾರಾ ಲೋಕೇಶ್
ಬೀದರ್ ನಗರದ ಜಾಬಶೆಟ್ಟಿ ಆಯುರ್ವೇದಿಕ್ ಕಾಲೇಜಿನಿಂದ ಪ್ರಾರಂಭವಾದ ಜಾಥಾ ಮೆರವಣಿಗೆಯು ಬಿ ವಿ ಬಿ ಕಾಲೇಜ್, ಕಿತ್ತೂರು ರಾಣಿ ಚನ್ನಮ್ಮ ವೃತ್ತ, .ಬೊಮ್ಮಗೊಂಡೇಶ್ವರ ವೃತ್ತ .ಭಗತ್ ಸಿಂಗ್ ವೃತ್ತ, .ಅಂಬೇಡ್ಕರ್ ವೃತ್ತದ ಮಾರ್ಗವಾಗಿ ನಾಡೋಜ ಡಾ. ಚನ್ನಬಸವ ಪಟ್ಟದ್ದೇವರ ರಂಗಮಂದಿರ ತಲುಪಿತು. ಮೆರವಣಿಗೆಯಲ್ಲಿ ಹಲವಾರು ಸಾಂಸ್ಕೃತಿಕ ಕಲಾತಂಡಗಳಾದ ಲಮಾಣಿ ಕುಣಿತ ನೋಡುಗರಿಗೆ ಗಮನ ಸೆಳೆಯಿತು. ನೂರಾರು ಜನ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಭಾಗಿಯಾಗಿದ್ದರು.