ಬೆಂಗಳೂರು: ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ಧಮ್ಮು, ಸಾಮರ್ಥ್ಯ ಬಿಜೆಪಿಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಬಾರಿ 17 ಏಕನಾಥ್ ಶಿಂದೆಗಳನ್ನು ಕರೆದುಕೊಂಡು ಹೋದಂತೆ ಈ ಬಾರಿಯೂ ಮಾಡಲು ಸಾಧ್ಯವಿಲ್ಲ ಎಂದೂ ಅವರು ತಿಳಿಸಿದ್ದಾರೆ. ಇದಲ್ಲದೆ, ಬಿಜೆಪಿಯವರು ಯಾರನ್ನು ಬೇಕಾದರೂ ದ್ವೇಷಿಸಿಕೊಳ್ಳಲಿ, ಅವರ ಬಗ್ಗೆ ತಾವು ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದು ಹೇಳಿದರು.
Blinkit Delivery: ಕೇವಲ 10 ನಿಮಿಷದಲ್ಲಿ ಆ್ಯಪಲ್ ಉತ್ಪನ್ನ ಡೆಲಿವರಿ ಮಾಡಲಿರುವ ಬ್ಲಿಂಕಿಟ್..!
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮತ್ತು ಅವರು ಬಿಜೆಪಿ ಸೇರುವ ಸಾಧ್ಯತೆಗಳ ಬಗ್ಗೆ ಕೇಳಿ ಬಂದಿರುವ ವದಂತಿಗಳನ್ನು ಪ್ರಿಯಾಂಕ್ ಖರ್ಗೆ ತಳ್ಳಿ ಹಾಕಿದ್ದಾರೆ. ಇದೊಂದು ಅನವಶ್ಯಕ ಚರ್ಚೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ಬಂದಿದ್ದರಿಂದ ಅವರು ಕಾರ್ಯಕ್ರಮಕ್ಕೆ ಹೋಗಿದ್ದಾರೆ, ಏಕನಾಥ್ ಶಿಂಧೆ ಅವರೊಂದಿಗೆ ಹೋಲಿಕೆ ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಅಲ್ಲದೆ ಮೋದಿ ಮತ್ತು ಖರ್ಗೆ ಅಕ್ಕಪಕ್ಕದಲ್ಲಿ ಫೋಟೋ ಇದ್ದರೆ ಮೋದಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳೋಕೆ ಆಗುತ್ತಾ ಎಂದು ವ್ಯಂಗ್ಯವಾಡಿದ್ದಾರೆ.