18ನೇ ಬೆಂಗಳೂರು ಅಂತಾರಾಷ್ಟ್ರೀ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಡಿದ ಮಾತು ಸದ್ಯ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಕನ್ನಡ ಚಿತ್ರರಂಗಕ್ಕೆ ಡಿಕೆಶಿ ವಾರ್ನಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮಾತನಾಡಿ, ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೋದ್ರಲ್ಲಿ ತಪ್ಪೇನಿಲ್ಲಾ. ನೀರಿನ ವಿಚಾರ ಬಂದಾಗ ಕಲಾವಿದರೇಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅದನ್ನೇ ಹೇಳಿರೋದು. ಅದಕ್ಕೆ ನನ್ನ ಸಹಮತವಿದೆ ಎಂದಿದ್ದಾರೆ.
ಇನ್ನೂ ಭಾರತೀಯ ಚಿತ್ರರಂಗದಲ್ಲೇ ಕನ್ನಡ ಚಿತ್ರರಂಗ ದೊಡ್ಡ ಹೆಸರು ಮಾಡಿದೆ. ಇಲ್ಲಿನ ನಟರು ಒಳ್ಳೊಳ್ಳೆ ಸಿನಿಮಾಗಳ ಮೂಲಕ ಇಡೀ ಚಿತ್ರರಂಗವನ್ನೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಆದ್ರೆ ಬೆಂಗಳೂರಿನಲ್ಲಿ ನಡೆಯುತ್ತಿರುವ 18ನೇ ಬೆಂಗಳೂರು ಅಂತಾರಾಷ್ಟ್ರೀ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಡಿದ ಮಾತು ಸದ್ಯ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೇವಲ ರಾಜಕೀಯ ಪಕ್ಷಗಳ ನಡುವೆ ಮಾತ್ರವಲ್ಲ.. ಕನ್ನಡ ಚಿತ್ರರಂಗದ ಕಲಾವಿದರೂ ಕೂಡ ಡಿಕೆಶಿ ಮಾತಿಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.