ಬಾಗಲಕೋಟೆ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಮಹಾರಾಣಿ ಕೆರೆಯಲ್ಲಿ ಬಾಲಕಿ ಶವ ಪತ್ತೆಯಾಗಿದೆ.
ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದ್ದುತ್ತಿದ್ದ ಹಿರೇಕೆರಿಗಲ್ಲಿ ನಿವಾಸಿ ತೇಜಸ್ವಿನಿ ದೊಡಮನಿ (16) ಮೃತಳಾಗಿದ್ದಾಳೆ. ಕಳೆದ ಫೆ.28ರಂದು ತೇಜಸ್ವಿನಿ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಪೋಷಕರು ಮುಧೋಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಬಾಲಕಿ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಬಾಲಕಿಯ ಸಾವಿಗೆ ಕಾರಣ ಏನೆಂಬುದು ಇನ್ನೂ ಪತ್ತೆಯಾಗಿಲ್ಲ.