ಕೊಪ್ಪಳ: ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಇದೀಗ ಸೆರೆಯಾಗಿದೆ. ಜಿಲ್ಲೆಯ ಗಂಗಾವತಿ ನಗರದ ಗುಡ್ಡಗಾಡು ಪ್ರದೇಶದ ಪಕ್ಕದಲ್ಲಿರುವ ಜಯನಗರದ ಹಿಂಭಾಗದಲ್ಲಿ ಭಾಗದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಸೋಮವಾರ ಬೆಳಗಿನಜಾವ ಚಿರತೆ ಬೋನಿಗೆ ಬಿದ್ದು ಸೆರೆಯಾಗಿದೆ. ಕಳೆದ ಹಲವು ದಿನಗಳಿಂದ ಜಯನಗರದ ಗುಡ್ಡಗಾಡು ಪ್ರದೇಶದಲ್ಲಿ ಹಲವಾರು ಬಾರಿ ಕಾಣಿಸಿಕೊಂಡಿದ್ದ ಆ ಚಿರತೆ ಆ ಪ್ರದೇಶದ ಜನರ ನಿದ್ದೆಗೆಡಿಸಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಚಿರತೆ ಸೆರೆಗೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದ್ದು ಸದ್ಯಕ್ಕೆ ಅಲ್ಲಿನ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ ಅನೇಕ ಚಿರತೆಗಳು ಇದ್ದು ಅರಣ್ಯ ಇಲಾಖೆಯವರು ತುರ್ತು ಕ್ರಮವಹಿಸಿ ಚಿರತೆಗಳನ್ನು ಸೆರೆ ಹಿಡಿಯಲು ಮುಂದಾಗಬೇಕಿದೆ.