ಮೈಸೂರು: ತೋಟದ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳು ಇಬ್ಬರೇ ಇದ್ದಾಗ ಮನೆಗೆ ನುಗ್ಗಿರೋ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಕೊಂದಿದ್ದಾರೆ.
ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ (52) ಮೃತತಾಗಿದ್ದಾರೆ. ದಂಪತಿಗೆ ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಮತ್ತು ಒಬ್ಬ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳು ಇದ್ದಾರೆ.
600ಕ್ಕೂ ಹೆಚ್ಚು ರೈತರಿಗೆ ನೋಟಿಸ್ – ಡಿಸಿ ಕಚೇರಿಗೆ ಮುತ್ತಿಗೆಯ ಎಚ್ಚರಿಕೆ ನೀಡಿದ ರೈತರು
ಒಣಗಿದ ಶುಂಠಿಯನ್ನು ಸಂಗ್ರಹಿಸಲು ಕೆಲಸಗಾರ ಗಣೇಶ್ ಸಂಜೆ ತೋಟದ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ಕಂಡು ಗಾಬರಿಗೊಂಡು ತಕ್ಷಣ ದೇವರಾಜ್ಗೆ ಮಾಹಿತಿ ನೀಡಿದ್ದಾರೆ. ಆದರೆ ದೇವರಾಜ್ ಸ್ಥಳಕ್ಕೆ ಬರುವ ಹೊತ್ತಿಗೆ ಇಬ್ಬರು ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನ ದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ವಿಧಿವಿಜ್ಞಾನ ತಂಡ ಕೂಡ ಪರಿಶೀಲನೆ ನಡೆಸಿದೆ.