ಬಾಗಲಕೋಟೆ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ವತಿಯಿಂದ ಮಂಡ್ಯದಲ್ಲಿ ನಡೆದ ಶಿಕ್ಷಕರ ಅಧಿವೇಶನದಲ್ಲಿ ಶ್ರೀಮತಿ ಭಾರತಿ ಮನ್ನಿಕೇರಿವರಿಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ನೀಡಲಾಯಿತು.
ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲೆಯ ಮನಸೂರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಭಾರತಿ ಮನ್ನಿಕೇರಿ ರವರಿಗೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ವಕೀಲರಾದ ಅರವಿಂದ ಮನ್ನಿಕೇರಿ ಹಾಗೂ ಕರ್ನಾಟಕ ರಾಜ್ಯದ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಕಾರ್ಯಕಾರಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.