ಗದಗ : ನೀರಿನ ಹೊಂಡದಲ್ಲಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಗದಗ ನಗರದ ಗಂಗಾಪೂರ ಪೇಟೆ ಬಳಿಯ ಕೊನೇರಿ ಹೊಂಡದಲ್ಲಿ ನಡೆದಿದೆ. ರಾಜು ಭೀಮಪ್ಪ ನಾರೆಯಣ್ಣವರ(30) ಸಾವಿಗೀಡಾದ ಯುವಕನಾಗಿದ್ದಾನೆ.
ರಾಜು ಕಳೆದ ಮೂರು ದಿನದಿಂದ ನಾಪತ್ತೆಯಾಗಿದ್ದು, ಮನೆಯವರು ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು. ಇಂದು ಗದಗ ನಗರದ ಕೊನೇರಿ ಹೊಂಡದಲ್ಲಿ ಯುವಕನ ಶವ ಪತ್ತೆಯಾಗಿದೆ. ಸದ್ಯ ಗದಗ ಶಹರ ಪೊಲೀಸರು ತನಿಖೆ ಕೈಗೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೇ ಸಾವಿನ ಕಾರಣ ತಿಳಿಯಬೇಕಿದೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಮಾನಿಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಇನ್ನೊಂದೆಡೆ ತುಮಕೂರು ನಗರದ ಅಮಾನಿಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ನಗರದ ಕೋಡಿ ಬಸವೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಸುಮಾರು 35-40 ವರ್ಷ ಮಹಿಳೆ ಶವ ಪತ್ತೆಯಾಗಿದೆ. ಎರಡು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ಸ್ಥಳಾಂತರಿಸಲಾಗಿದೆ.