ಹುಬ್ಬಳ್ಳಿ:- ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದೆ. ಹೊರ ರೋಗಿಗಳ ನೊಂದಣಿ ವಿಭಾಗದ ಶುಲ್ಕ 10 ರೂಪಾಯಿಂದ 20 ರೂಪಾಯಿಗೆ ಏರಿಕೆಯಾಗೊದೆ. ಒಳ ರೋಗಿಗಳ ನೊಂದಣಿ ವಿಭಾಗದ ಶುಲ್ಕ 30 ರೂಪಾಯಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್ಗೆ 14 ದಿನ ನ್ಯಾಯಾಂಗ ಬಂಧನ!
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿದೆ. ನಿತ್ಯ ನೂರಾರು ರೋಗಿಗಳು ಇಲ್ಲಿ ಚಿಕಿತ್ಸೆ
ಪಡೆಯುತ್ತಾರೆ. ಇದೀಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದ್ದು, ಸಾರ್ವಜನಿಕರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಎಕ್ಸರೇ, ಸ್ಕ್ಯಾನಿಂಗ್, ಜನನ, ಮರಣ ಪ್ರಮಾಣ ಪತ್ರ ನೀಡುವಿಗೆ ದರದಲ್ಲೂ ಬದಲಾವಣೆ ಮಾಡಿದೆ. ಜನನ, ಮರಣ ಪ್ರಮಾಣ ಪತ್ರ ನೀಡಲು ಈ ಮುಂಚೆ 5 ರೂಪಾಯಿ ತೆಗೆದುಕೊಳ್ಳಲಾಗುತ್ತಿತ್ತು. ಇದೀಗ, ಈ ದರವನ್ನು ಕಿಮ್ಸ್ ಆಡಳಿತ ಮಂಡಳಿ 50 ರೂಪಾಯಿಗೆ ಏರಿಸಿದೆ. ಕಿಮ್ಸ್ ಬರೊಬ್ಬರಿ ಎಂಟು ವರ್ಷಗಳ ನಂತರ ದರ ಬದಲಾವಣೆ ಮಾಡಿದೆ.,
ಇನ್ನೂ ಈ ಬಗ್ಗೆ ಕಿಮ್ಸ್ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ಮಾತನಾಡಿ, ಕಿಮ್ಸ್ನಲ್ಲಿ ಶೇ.5ರಿಂದ 10ರಷ್ಟು ಶುಲ್ಕ ಹೆಚ್ಚಳ ಮಾಡಿದ್ದೇವೆ. ದಿಢೀರ್ ದರ ಏರಿಕೆಯಾಗಿಲ್ಲ, ಒಂದು ವರ್ಷದಿಂದ ಚರ್ಚೆಯಾಗುತ್ತಿತ್ತು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಸಭೆ ನಂತರ ದರ ಬದಲಾವಣೆ ಮಾಡಿದ್ದೇವೆ. ಇದು ಬಡವರಿಗೆ ಹೊರೆ ಆಗಲ್ಲ ಎಂದು ಹೇಳಿದರು.